ಹುಬ್ಬಳ್ಳಿ: ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನಕ್ಕೆ ಮುಸುಕಿನ ಗುದ್ದಾಟ ಜೋರಾಗಿದೆ. ಇದುಹೀಗೇ ಮುಂದುವರೆದರೆ ಕಾಂಗ್ರೆಸ್ ಸರ್ಕಾರದ ಅಧಃಪತನ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳೀದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರು ನೇರವಾಗಿ ಏನನ್ನೂ ಮಾತನಾಡುತ್ತಿಲ್ಲ. ಅವರ ಬೆಂಬಲಿತ ಸಚಿವರು, ಶಾಸಕರಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಎಐಸಿಸಿ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಕಡಿವಾಣ ಹಾಕಬೇಕು ಎಂದರು.
Swarail App: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲ ಸೇವೆಗಳು ಒಂದೇ ಕಡೆ ಲಭ್ಯ..! ಯಾವುದು ಗೊತ್ತಾ..?
ಕೆಪಿಎಸ್ಸಿ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಭ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಅದನದಲ್ಲಿ ಈಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಇದು ಕೇವಲ ಚರ್ಚೆಗೆ ಸೀಮಿತವಾಗದೇ ಉನ್ನತ ಮಟ್ಟದ ತನಿಖೆಯಾಗಬೇಕು.
ಯೂಪಿಎಸ್ಸಿ ಮಾದರಿಯಲ್ಲೇ ನೇಮಕಾತಿ, ವರ್ಗಾವಣೆ ಆಗುವಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಯಾಗ್ ರಾಜ್ಗೆ ಭೇಟಿ ನೀಡಿ ಕುಂಭ ಮೇಳದಲ್ಲಿ ಭಾಗಿಯಾದ ಶಾಸಕ, ಸಚಿವರಿಗೆ ಹಾಗೂ ಗಣ್ಯರಿಗೆ ಯುಪಿ ಸರ್ಕಾರ ಅಭಿನಂದನಾ ಪತ್ರ ಕಳುಹಿಸಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.