ಬೆಂಗಳೂರು:- ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಆದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ವಾಹನಗಳ ಸಂಚಾರಕ್ಕೆ ಬಂದ್ ಆಗಲಿದೆ. ಈ ಫ್ಲೈ ಓವರ್ ಕಾರಣಕ್ಕೆ ನಗರದಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಈಗ ಪ್ರತಿದಿನ ಮುಂದಿನ ಆದೇಶದ ತನಕ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸೌಜನ್ಯ ಕೊಲೆ ಕೇಸ್: ಧರ್ಮಸ್ಥಳದ ಹೆಸರು ತೆಗೆದಿದ್ದ ಯೂಟ್ಯೂಬರ್ ಗೆ ಇದೆಂಥಾ ಸ್ಥಿತಿ!
ಈ ಬಗ್ಗೆ X ಮಾಡಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು, ಹೊಸೂರು ರಸ್ತೆ ಎಲಿವೇಟೆಡ್ ಫ್ಲೈಓವರ್ನಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.