ಬೆಂಗಳೂರು: ಸೌಜನ್ಯ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಹಿನ್ನೆಲೆ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಡಿಜಿಪಿಯಿಂದ ಎಚ್ಚರಿಕೆ ನೀಡಲಾಗಿದೆ. ಸಮೀರ್ ಎಂಬಾತ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಟ್ಟಿದ್ದಾನೆ.
ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಘಟಕಾಧಿಕಾರಿಗಳು ವಿಫಲರಾಗಿದ್ದಾರೆ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ.
ಆದ್ದರಿಂದ ಈ ಬಗ್ಗೆ social media monitering cellಗಳನ್ನ ಚುರುಕುಗೊಳಿಸಬೇಕು. ಹಾಗೂ ಕೈಗೊಂಡ ಕ್ರಮದ ಬಗ್ಗೆ ಎಡಿಜಿಪಿಗೆ ಮಾಹಿತಿ ನೀಡಬೇಕು ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ. ಎಲ್ಲಾ ಪೊಲೀಸ್ ಆಯುಕ್ತರು,ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷರುಗಳಿಗೆ ಡಿಜಿ ಐಜಿಪಿ ಕಾರ್ಯಾಲಯದಿಂದ ಹೊರಡಿಸಿರೋ ಪತ್ರವಾಗಿದೆ.
2012ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅವರನ್ನು ಅಪಹರಿಸಲಾಯಿತು. ಅದೇ ದಿನ ರಾತ್ರಿ ಅವರ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು.
ಸೌಜನ್ಯ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು. ಆದರೆ ಈ ಕೇಸ್ಗೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿದ್ದ ಸಂತೋಷ್ ರಾವ್ ಅವರು ನಿರಪರಾಧಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ.