ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಎಷ್ಟು ಅಂತ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎಂಜಿ ಮೂಳೆ, ಕಾಂಗ್ರೆಸ್ನ ಉಮಾಶ್ರೀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿದುಕೊಂಡಿದೆ.
9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 ಕೋಟಿ ರೂ. ಬಾಕಿಯಿದೆ ಎಂದು ಮಾಹಿತಿ ನೀಡಿದರು.
Home Buying: ನಿಮ್ಮ ಹೆಂಡತಿಯ ಹೆಸರಿನಲ್ಲಿ ಮನೆ ಖರೀದಿಸುವುದು ಲಾಭದಾಯಕ..! ಏಕೆ ಗೊತ್ತಾ..?
ಬಾಕಿ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಕೇಳಿದ್ದೇವೆ. ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ ಕೂಡಲೇ ಬಾಕಿ ಹಣ ಬಿಡುಗಡೆ ಮಾಡ್ತೀವಿ. ಹಾಲಿನ ಉತ್ಪಾದನೆ ಜಾಸ್ತಿ ಆಗಿದೆ. ಬಜೆಟ್ ಅಲೋಕೇಷನ್ ಅದರಂತೆ ಕೊಡ್ತಿಲ್ಲ.
ಹೀಗಾಗಿ ಬಾಕಿ ಉಳಿದಿದೆ. ಸಿಎಂ ಅವರಿಗೆ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದೇನೆ. ಆದಷ್ಟು ಶೀಘ್ರವೇ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಇನ್ನೂ ಹಾಲಿನ ದರ ಏರಿಕೆಗೆ ರೈತರ ಬೇಡಿಕೆಯಿದ್ದು, 10 ರೂ. ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಎಷ್ಟು ಅಂತ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ವಿವರಿಸಿದರು.