ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರವು ಎಸ್ಟಿಪಿ ಮತ್ತು ಟಿಎಸ್ಪಿ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಚಿತ್ರದುರ್ಗದಲ್ಲಿ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗ್ಯಾರಂಟಿಗಳಿಗಾಗಿ ಎಸ್ಟಿಪಿ, ಟಿಎಸ್ಪಿ ಅನುದಾನ ಬಳಕೆ ; ಜೆಡಿಎಸ್ ಪ್ರತಿಭಟನೆ
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ನಂತರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಎಸ್ಸಿ ಎ್ಸಟಿ ಹಣವನ್ನು ಗ್ಯಾರೆಂಟಿ ಯೋಜನೆಗೆ ಬಳಸಿ ಈ ಜನಾಂಗಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು. ಮುಂದಿನ ಬಜೆಟ್ನಲ್ಲಿ ಎಸ್ಸಿ,ಎಸ್ಟಿ ಜನಾಂಗದ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು.