ಬೀದರ್ : ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾ. ನಾಗಲಕ್ಷ್ಮೀ ಚೌಧರಿ ಅವರು ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಸ್ತ್ರೀಯರ ತುರ್ತು ಚಿಕಿತ್ಸಾ ವಾರ್ಡ್, ಒಪಿಡಿಗೆ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಅವರು ಅಲ್ಲಿನ ರೊಗಿಗಳ ಸಮಸ್ಯೆ ಆಲಿಸಿದರು. ಔಷಧಿ, ಗುಣಮಟ್ಟದ ಆಹಾರ ಪೂರೈಕೆ ಬಗ್ಗೆ ರೋಗಿಗಳ ಸಂಬಂಧಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಬ್ರಿಮ್ಸ್ ಆಸ್ಪತ್ರೆಯಲ್ಲಿನ ಸುಧಾರಣೆ ಕಂಡು ಸಂತಸ ವ್ಯಕ್ತಪಡಿಸಿದರು.
ಮಳೆ ಅವಾಂತರ: ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತ, ತಪ್ಪಿದ ದುರಂತ!
ಇನ್ನೂ ಇದೇ ವೇಳೆ ಬ್ರಿಮ್ಸ್ ಸ್ವಚ್ಛತಾಕರ್ಮಿ ಸಿಬ್ಬಂದಿ ನಾಗಲಕ್ಷ್ಮೀ ಚೌಧರಿ ಅವರಿಗೆ ಸಮಾನ ಕೆಲಸಕ್ಕೆ, ಸಮಾನ ವೇತನ ನೀಡುವಂತೆ ಕೈಮುಗಿದು ಮನವಿ ಮಾಡಿಕೊಂಡರು. ಪ್ರತಿ ತಿಂಗಳು ಸರಿಯಾಗಿ ಸಂಬಳ ಆಗುತ್ತಿಲ್ಲ, ಕುಟುಂಬ ನಿರ್ವಹಣೆ ಕಷ್ಟ ಆಗ್ತಿದೆ ಅಂತಾ ಅಳಲು ತೋಡಿಕೊಂಡರು.