ರಾಯಚೂರು: ಮಂತ್ರಾಲಯದಲ್ಲಿ ರಾಯರ 430ನೇ ವರ್ಧಂತಿ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು 430ನೇ ವರ್ಧಂತಿ ಪ್ರಯುಕ್ತ ಕಳೆದ 6 ದಿನಗಳಿಂದ ವಿಜೃಂಭಣೆಯಿಂದ ಗುರುವೈಭವೋತ್ಸವ ನಡೆಯುತ್ತಿದ್ದು, ಗುರುವಾರ ರಾತ್ರಿ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.
ಗುರುರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ ಉತ್ಸವವನ್ನ ಪ್ರತಿ ವರ್ಷದಂತೆ ಈ ವರ್ಷವೂ ಮಂತ್ರಾಲಯದಲ್ಲಿ ಗುರುವೈಭವೋತ್ಸವವಾಗಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಇನ್ನೂ ಗುರುವೈಭವೋತ್ಸವದ ಕೊನೆಯ ದಿನವಾದ ಇಂದು ಚೆನ್ನೈ ಶ್ರೀರಾಘವೇಂದ್ರ ನಾದಹಾರ ಸೇವಾ ಟ್ರಸ್ಟ್ನ ನೂರಾರು ಕಲಾವಿದರಿಂದ ನಾದಹಾರ ಸಮರ್ಪಣಾ ಸೇವೆ ನಡೆಯಿತು. ಕಳೆದ 20 ವರ್ಷಗಳಿಂದ ನಾದಹಾರ ಸಮರ್ಪಣಾ ಸೇವೆ ನಡೆಯುತ್ತಿದೆ
ಮಂತ್ರಾಲಯದಲ್ಲಿ ಗುರು ವೈಭವೋತ್ಸವ ; ರಾಯರ ದರ್ಶನ ಪಡೆದ ಆಂಧ್ರ ಪ್ರದೇಶ ಸಚಿವ ನಾರಾ ಲೋಕೇಶ್
ರಾಯರ ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಿತು. ಉತ್ಸವ ಮೂರ್ತಿ ಪ್ರಹ್ಲಾದ ರಾಜರನ್ನ ಚಿನ್ನದ ರಥದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು. ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗಿದ್ದರು.