ಬೆಂಗಳೂರು:- ಇಂದು ಸಿದ್ದರಾಮಯ್ಯ ಅವರು 16ನೇ ಬಜೆಟ್ ಮಂಡಿಸಲಿದ್ದಾರೆ. ಆದರೆ ಅದಕ್ಕೂ ಮುನ್ನ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಲಿವೆ.
ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ಬಗ್ಗೆ ಕೆಲವೊಂದು ನೋವಿದೆ ; ರಮೇಶ್ ಜಿಗಜಿಣಗಿ
ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಿದ್ದು, ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಿದ್ದಾರೆ
ಇನ್ನೂ ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು. ಬೆಳಗ್ಗೆ 10:30 ಕ್ಕೆ ಆರಂಭವಾಗುವ ರಾಹುಕಾಲ ಮಧ್ಯಾಹ್ನ 12:30 ರ ವರೆಗೂ ಇರಲಿದೆ.