ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೆಲವೇ ಹೊತ್ತಿನಲ್ಲಿ ಆಯವ್ಯಯ ಮಂಡಿಸಲಿದ್ದಾರೆ. ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದ ಅಭಿಮಾನಿ ಪ್ರಸನ್ನಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಕಾವೇರಿ ನಿವಾಸ ಬಳಿ ಅಭಿಮಾನಿ ಪ್ರಸನ್ನಕುಮಾರ್ ಶುಭಾಶಯ ಕೋರಿ ಪೋಸ್ಟರ್ ಪ್ರದರ್ಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ಗೆ ಅನುಮೋದನೆ ಪಡೆದರು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಬೆಂಗಳೂರಿನ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಬೆಂಗಳೂರಿನ ಟ್ರಾಫಿಕ್ ಪರಿಹಾರಕ್ಕೆ ಹೊಸ ಯೋಜನೆ ಘೋಷನೆ ಮಾಡುತ್ತಾರಾ ಎಂಬ ನಿರೀಕ್ಷೆ ಇದೆ. ಟನೆಲ್ ರಸ್ತೆಗೆ ಮತ್ತಷ್ಟು ಅನುದಾನ, ಇಂದಿರಾ ಕ್ಯಾಂಟಿನ್ಗಳಿಗೆ ಮತ್ತಷ್ಟು ಬದಲಾವಣೆ, ಕಾಯಕಲ್ಪ, ನಗರೋತ್ಥಾನ ಯೋಜನೆಗಳಿಗೆ ಸರ್ಕಾರದ ಹೆಚ್ಚಿನ ಅನುದಾನ, ಹೊಸದಾಗಿ ಸೇರ್ಪಡೆಯಾಗಿರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆ, ಹೀಗೆ ಹಲವಾರು ನಿರೀಕ್ಷೆಗಳು ಜನರಲ್ಲಿವೆ.