ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಶುಕ್ರವಾರ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ 2.0 ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ನಾಲ್ಕು ಲಕ್ಷ ಕೋಟಿ ರೂಗೂ ಅಧಿಕ ಗಾತ್ರದ ಬಜೆಟ್ ಇದಾಗಿದ್ದು, ಬೆಟ್ಟದಷ್ಟು ನಿರೀಕ್ಷೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿದೆ.
ಇನ್ನೂ ಈ ವೇಳೆ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.