ಬೆಂಗಳೂರು: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ. ಇನ್ನೂ ಬ್ರಾಂಡ್ ಬೆಂಗಳೂರಿಗೆ 1800 ಕೋಟಿ ರೂಪಾಯಿ ವೆಚ್ಚದಲ್ಲಿ 21 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ನಗರದಲ್ಲಿ ಹವಾಮಾನ ವೈಪರೀತ್ಯಗಳನ್ನು ನಿಯಂತ್ರಿಸಲು ಹಾಗೂ ಒಳಚರಂಡಿ ಮತ್ತು ಎಸ್ಟಿಪಿ ಸೌಲಭ್ಯಗಳನ್ನು ಸುಧಾರಿಸಲು 3000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಾವೇರಿ ನದಿಯಿಂದ ನೀರು ಪೂರೈಸುವ 5ನೇ ಹಂತದ ಯೋಜನೆಗೆ 555 ಕೋಟಿ ರೂಪಾಯಿಗಳನ್ನು ಬಳಸಲಾಗುವುದು,
ಇದರಿಂದ 110 ಹಳ್ಳಿಗಳಿಗೆ ಕುಡಿಯುವ ನೀರು ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಮೆಟ್ರೋ ಜಾಲವನ್ನು 98.60 ಕಿ.ಮೀ.ಗೆ ವಿಸ್ತರಿಸಲಾಗುವುದು, ಇದರಲ್ಲಿ ದೇವನಹಳ್ಳಿಗೆ ಸಂಪರ್ಕವೂ ಸೇರಿದೆ.