ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇನ್ನೂ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದ್ದು, 50 ಪ್ರೌಢಶಾಲೆಗಳನ್ನು ಉನ್ನತೀಕರಿಸಲಾಗುವುದು. ಜೊತೆಗೆ, 500 ಹೊಸ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸಿ, 100 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲಾಗುವುದು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ವಿದ್ಯಾರ್ಥಿಗಳ ವಸತಿ ಸೌಕರ್ಯವನ್ನು ಸುಧಾರಿಸಲು ಹಾಸ್ಟೆಲ್ಗಳ ದುರಸ್ತಿಗೆ 25 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅಥಣಿಯಲ್ಲಿ ಹೊಸ ಕೃಷಿ ಕಾಲೇಜೊಂದನ್ನು ಸ್ಥಾಪಿಸುವ ಮೂಲಕ ಕೃಷಿ ಶಿಕ್ಷಣಕ್ಕೂ ಉತ್ತೇಜನ ನೀಡಲಾಗುವುದು.