ಬೆಂಗಳೂರು: ಈ ವರ್ಷ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ 2025-26 ನೇ ಸಾಲಿನಲ್ಲಿ 40,000 ಕೋಟಿ ಸಂಗ್ರಹಣಾ ಗುರಿ ಅಬಕಾರಿ ಇಲಾಖೆಗೆ ನೀಡಲಾಗಿದೆ. ಹೌದು ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ.
ಪ್ರೀಮಿಯಂ ಮದ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ವಿವರಿಸಿದರು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ಜೊತೆಗೆ ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಇ-ಹರಾಜಿನ (ಆನ್ಲೈನ್) ಮೂಲಕ ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯಿದೆ. ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶ ಸಿದ್ಧಪಡಿಸಿ ಆನ್ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸಿಎಂ ತಿಳಿಸಿದರು.