ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯವು ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಬಂಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿಯಿಂದ 14.8 ಕೆಜಿ ಚಿನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದೆ. ಅಂದ್ಹಾಗೆ ರನ್ಯಾ ರಾವ್, ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿದ್ದರು. ರನ್ಯಾ ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ.
Gold Loans: ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಸಾಲ: ಟಾಪ್ 5 ಬ್ಯಾಂಕ್ʼಗಳು ಯಾವುವು ಗೊತ್ತಾ..?
ಇದೀಗ ನಟಿ ರನ್ಯಾ ರಾವ್ ವಿರುದ್ಧ ಡಿಆರ್ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕೇಂದ್ರ ತನಿಖಾ ದಳ (CBI) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ತನಿಖೆ ಆರಂಭಿಸಿದೆ.
14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್ಐ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ.