ಬೆಂಗಳೂರು:- ಹೊಸ ರೇಷನ್ ಕಾರ್ಡ್ ಪಡೆಯಲು ಕಾಯ್ತಿದ್ದೀರಾ!? ಹಾಗಿದ್ರೆ ನೀವು ಈ ಸುದ್ದಿಯನ್ನು ಪೂರ್ಣವಾಗಿ ಓದಿ. ಹೌದು, ಹೊಸ ಪಡಿತರ ಚೀಟಿ ಪಡೆಯುವ ಬಗ್ಗೆ ಆಹಾರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.
Champions Trophy 2025: 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ!
ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ವಿತರಣೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ರೇಷನ್ ಕಾರ್ಡ್ ನಿಗದಿ ಗುರಿ ಮುಕ್ತಾಯಗೊಂಡಿದೆ. ಹೊಸ ಕಾರ್ಡ್ ಕೊಡುವುದನ್ನು ನಿಲ್ಲಿಸಲಾಗಿದೆ. ಅನರ್ಹರ ಕಾರ್ಡ್ ರದ್ದು ಮಾಡುವವರೆಗೂ ಹೊಸ ಕಾರ್ಡ್ಗಳನ್ನು ಕೊಡಲಾಗುವುದಿಲ್ಲ ಎಂದು ವಿಧಾನಸಭೆಯಲ್ಲಿ ಸಚಿವರು ಹೇಳಿದ್ದಾರೆ. ಹೊಸ ಅರ್ಜಿ ಹಾಕಿರುವ ಜನರು ಬಿಪಿಎಲ್ ಕಾರ್ಡ್ಗಳಿಗಾಗಿ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಸದ್ಯ ಹೊಸ ರೇಷನ್ ಕಾರ್ಡ್ ಕೊಡಲು ಸರ್ಕಾರದಲ್ಲು ಇದೀಗ ಅವಕಾಶ ಇಲ್ಲ . ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ.
ನಕಲಿ ದಾಖಲೆ ನೀಡಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿ ಅಂತಹವರನ್ನು ಎಪಿಎಲ್ಗೆ ವರ್ಗಾಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದೀಗ ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಪ್ಡೇಡ್ ಮಾಹಿತಿಯನ್ನು ಕೊಟ್ಟಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರು ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಿದರೆ ಮತ್ತಷ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲು ಅನುಕೂಲ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಇತ್ತೀಚೆಗಷ್ಟೇ ತಿಳಿಸಿದ್ದರು.