ನವದೆಹಲಿ:- 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿದ್ದಾರೆ.
X ಮಾಡಿರುವ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.