ಭೋಪಾಲ್:- ಬಲವಂತವಾಗಿ ಮಹಿಳೆಯರನ್ನು ಮತಾಂತರ ಮಾಡಿದ್ರೆ ನೇಣು ಶಿಕ್ಷೆ ಗ್ಯಾರಂಟಿ ಎಂದು ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಏರ್ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಗುಮಾನಿ!
ಈ ಸಂಬಂಧ ಅಲ್ಲಿನ ಸಿಎಂ ಮೋಹನ್ ಯಾದವ್ ಮಾತನಾಡಿ, ಬಲವಂತದ ಮತಾಂತರ ವಿಚಾರದಲ್ಲಿ ಬಿಜೆಪಿ ಸರ್ಕಾರ ಸಹಿಷ್ಣು ಆಗಲ್ಲ. ಅಪ್ರಾಪ್ತೆಯರ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆಯಂತೆಯೇ, ಹುಡುಗಿಯರ ಧಾರ್ಮಿಕ ಮತಾಂತರಕ್ಕೂ ಮರಣದಂಡನೆ ವಿಧಿಸುವ ನಿಬಂಧನೆಯನ್ನು ನಮ್ಮ ಸರ್ಕಾರ ಪರಿಚಯಿಸಲಿದೆ ಎಂದು ಸಿಎಂ ಹೇಳಿದ್ದಾರೆ.
ಮುಗ್ಧ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುವವರ ವಿರುದ್ಧ ಸರ್ಕಾರ ತುಂಬಾ ಕಟ್ಟುನಿಟ್ಟಾಗಿದೆ. ಈ ನಿಟ್ಟಿನಲ್ಲಿ ಮರಣದಂಡನೆಗೆ ಅವಕಾಶ ಕಲ್ಪಿಸಲಾಗುವುದು. ಇದರ ಜೊತೆಗೆ, ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಲ್ಲಿ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸುವ ಅವಕಾಶವನ್ನು ಸಹ ಪರಿಚಯಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಹೇಳಿಕೆಗೆ ಕಾಂಗ್ರೆಸ್ ನಾಯಕ ಆರಿಫ್ ಮಸೂದ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸ್ವಯಂಪ್ರೇರಿತ ಮತಾಂತರವು ಸಾಂವಿಧಾನಿಕ ಹಕ್ಕು. ಕಾನೂನು ಬಲವಂತದ ಮತಾಂತರವನ್ನು ವಿರೋಧಿಸುವುದಾದರೆ, ಅದು ತಾರತಮ್ಯವಿಲ್ಲದೆ ಎಲ್ಲರಿಗೂ ಅನ್ವಯಿಸಬೇಕು ಎಂದಿದ್ದಾರೆ.