ರಾಮನಗರ: ಯಾರೂ ಸಹ ಭೂಮಿಯನ್ನು ಮಾರಾಟ ಮಾಡಲು ಹೋಗಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ.
ಹಂತ, ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250 ಕೋಟಿ ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ ಎಂದು ಹೇಳಿದರು. ಚೀನಾದಿಂದ ರೇಷ್ಮೆ ಆಮದು ಕಡಿಮೆಯಾಗಿದೆ. ಆದ ಕಾರಣಕ್ಕೆ ರೇಷ್ಮೆಗೆ ಉತ್ತಮ ಬೆಲೆ ಬಂದಿದೆ.
ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು.? ಹೆಚ್ಚು ಕುಡಿದ್ರೆ ಏನಾಗುತ್ತೆ ಗೊತ್ತಾ.?
ಅದಕ್ಕೆ ಯಾರೂ ಸಹ ಭೂಮಿಯನ್ನು ಮಾರಾಟ ಮಾಡಲು ಹೋಗಬೇಡಿ. ಮುಂದಕ್ಕೆ ನಿಮ್ಮ ಭೂಮಿಯ ಬೆಲೆ ಹೆಚ್ಚಲಿದೆ. ಶಿಡ್ಲಘಟ್ಟ ಭಾಗದಲ್ಲಿ ನಮಗಿಂತ ಹೆಚ್ಚು ರೇಷ್ಮೆ ಬೆಳೆಯುತ್ತಿದ್ದಾರೆ. ಸಿಲ್ಕ್ ಮತ್ತು ಮಿಲ್ಕ್ ಅನ್ನು ಕೋಲಾರ ಭಾಗದಲ್ಲಿ ಹೆಚ್ಚು ಉತ್ಪಾದನೆ ಮಾಡುತ್ತಿದ್ದಾರೆ ಎಂದು ಹೇಳಿದರು.