ಬೆಂಗಳೂರು: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ಬ್ಯಾನ್ ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಲಾಗಿದೆ. ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಅರ್ಧಂಬರ್ಧ ಖಾಲಿಯಾದ ಸೋಪುಗಳನ್ನು ಕವರ್ಗಳಲ್ಲಿ ಹಾಕಿ ನದಿಯಲ್ಲೇ ಬಿಡುತ್ತಿದ್ದರು.
ಇದರಿಂದ ನದಿ ನೀರಿನಲ್ಲಿ ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಈ ಕ್ರಮ ಕೈಗೊಂಡಿದೆ.
ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು.? ಹೆಚ್ಚು ಕುಡಿದ್ರೆ ಏನಾಗುತ್ತೆ ಗೊತ್ತಾ.?
ನದಿ ದಡಗಳಲ್ಲಿ ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.