ಬಿಜೆಪಿ ಯುವನಾಯಕ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಆರತಕ್ಷತೆ ವಿಜೃಂಭಣೆಯಿಂದ ನಡೆದಿದೆ. ಈ ಆರತಕ್ಷತೆಗೆ ಗಣ್ಯಾತಿಗಣ್ಯರ ದಂಡೇ ಹರಿದು ಬಂದಿದ್ದು, ನವ ದಂಪತಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ಶುಭ ಹಾರೈಸಿದೆ. ಸಿನಿಮಾ ತಾರೆಯರು, ಕಾಂಗ್ರೆಸ್, ಬಿಜೆಪಿ ಪಕ್ಷದ ಹಲವು ಮುಖಂಡರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.