ಬೆಂಗಳೂರು: ಬೆನ್ನು ನೋವಿನಿಂದ ಬಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಇಂದು ಆಯೋಜನೆಗೊಂಡಿದ್ದ ಸಂಚಾರಿ ಆರೋಗ್ಯ ಘಟಕ ವಾಹನಗಳ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದ್ದು, ನಾಳೆಗೆ ಮುಂದೂಡಲಾಗದೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಚಾಲನೆ ನೀಡಬೇಕಿತ್ತು. ಆದರೆ ಸಿಎಂ ಸಿದ್ದರಾಮಯ್ಯೆ ಅನಾರೋಗ್ಯ ಹಿನ್ನೆಲೆಯಲ್ಲಿ ನಾಳೆಗೆ ಮುಂದೂಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ. ಇಂದಿನ ವಿಧಾನಸಭೆ, ಪರಿಷತ್ ಕಲಾಪಕ್ಕೂ ಸಿಎಂ ಸಿದ್ದರಾಮಯ್ಯ ಗೈರಾಗಿದ್ದಾರೆ..