ಹಾಸನ : ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ ; 8 ವರ್ಷಗಳ ಬಳಿಕ ಹೊರಬಿದ್ದ ತೀರ್ಪು
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎಂಟು ತಿಂಗಳ ಹಿಂದಷ್ಟೇ ಭರತ್ ಅರಸೀಕೆರೆ ತಾಲೂಕಿನ ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿದ್ದರು. ಆದರೆ ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಗೀತಾ ಮನೆ ಬಿಟ್ಟು ಹೋಗಿದ್ದರು. ಕುಟುಂಬಸ್ಥರು ಹಾಗೂ ಗ್ರಾಮಸ್ಥರೆಲ್ಲ ಸೇರಿ ಎರಡು ಬಾರಿ ರಾಜಿ-ಪಂಚಾಯ್ತಿ ನಡೆಸಿದ್ದರು. ಆದರೂ ಗೀತಾ ಗಂಡನ ಜೊತೆ ಇರದೆ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.