ಬೆಂಗಳೂರು: ಅಕ್ರಮ ಚಿನ್ನ ಸಾಗಾಣಿಕೆ ಕೇಸ್ನಲ್ಲಿ ಸಿಕ್ಕಿ ಬಿದ್ದಿರೋ ನಟಿ ರನ್ಯಾ ರಾವ್ಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಇನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಟಿ ರನ್ಯಾ ರಾವ್ ಅವರನ್ನು ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್ ತಂದೆಗೂ ಸಹ ಸಂಕಷ್ಟ ಎದುರಾಗಿದೆ.
ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಇಂದು ಆದೇಶ ನೀಡಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ?
ಈ ಯೋಜನೆಯಡಿ ಕೇವಲ 50 ರೂ. ಕಟ್ಟಿದರೆ ನಿಮ್ಮ ಕೈಗೆ ಸಿಗುತ್ತೆ ಲಕ್ಷ, ಲಕ್ಷ! ಇದು ಯಾವ ಸ್ಕೀಮ್ ಗೊತ್ತಾ..?
ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜು ಎಂಬವರನ್ನು ಡಿಆರ್ಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.