ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಕುರಿತು ಕೇಳಿದ ಪ್ರಶ್ನೆಗಳಿಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಎಲ್ಲಾದಕ್ಕೂ ಕಾಲಾವಕಾಶ ಕೇಳುತ್ತಿರುವುದರ ಬಗ್ಗೆ ಪರಿಷತ್ ಶಾಸಕ ಟಿ. ಎ.ಶರವಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಮಾತನಾಡಿದ ಅವರು,
ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಬಂದಿರುವ ದೂರುಗಳ ಸಂಖ್ಯೆ ಎಷ್ಟು? ಸದರಿ ಭೂಮಿಯ ಅಂದಾಜು ಮೌಲ್ಯವೆಷ್ಟು ಮತ್ತು ಒತ್ತುವರಿ ತೆರವುಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳಾವುವು? ಇಲ್ಲಿಯವರೆಗೆ ಎಷ್ಟು ಸರ್ಕಾರಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಹಾಗೂ ವಶಪಡಿಸಿಕೊಂಡ ಭೂಮಿಯನ್ನು ಯಾವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ? ಸರ್ಕಾರಿ ಭೂಮಿ ಒತ್ತುವರಿ ತಡೆಯಲು ಮತ್ತು ಭೂಮಿಯನ್ನು ಸಂರಕ್ಷಣೆ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳು ಯಾವುವು? ಎನ್ನುವ ಕುರಿತು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವರು, ಒಂದು ವಾರಗಳ ಕಾಲಾವಕಾಶ ನೀಡುವಂತೆ ಕೋರಿದರು. ಕೇಳಿದ ಯಾವ ಪ್ರಶ್ನೆಗೂ ಉತ್ತರಿಸುತ್ತಿಲ್ಲ ಎನ್ನುವ ಬಗ್ಗೆ ಶರವಣ ಅವರು ಆಕ್ಷೇಪ ವ್ಯಕ್ತಪಡಿಸಿದರು.