ಬೆಂಗಳೂರು: ಸಿಐಡಿ ತನಿಖೆ ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು’ ಎಂದು ಹೇಳಿದ್ದಾರೆ.
ಈ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ ಇದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಕಾರಣದಿಂದಲೇ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು ಮತ್ತು ಸರ್ಕಾರ ಸಿಐಡಿ ತನಿಖೆ ಆದೇಶವನ್ನು ಹಿಂದಕ್ಕೆ ಪಡೆಯಿತು ಎನ್ನುವ ಮಾತು ಕೇಳಿ ಬಂದಿದ್ದವು.
ತಿಂಗಳ ಮೊದಲ ದಿನ ಉಪ್ಪು ಖರೀದಿಸಿ ಸಾಕು, ಲಕ್ಷ್ಮಿ ಕೃಪೆ-ದುಡ್ಡು ಎಲ್ಲವೂ ಸಿಗುತ್ತೆ..!
ಈ ಬಗ್ಗೆಯೂ ಪರಮೇಶ್ವರ್ ಮಾತನಾಡಿದ್ದಾರೆ. ‘ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.