ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಸಮೀಪಿಸುತ್ತಿದೆ. ಮಾರ್ಚ್ 17ರಂದು ಅವರ ಜನ್ಮದಿನ ಆಚರಿಸಲಾಗುತ್ತದೆ. ಆ ಪ್ರಯುಕ್ತ ಇಂದು ಸೂಪರ್ ಹಿಟ್ ಅಪ್ಪು ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಇಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ ಹೌದು. ಹಾಗಾಗಿ ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ.
ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ‘ಅಪ್ಪು’ ಸಿನಿಮಾ ರೀ-ರಿಲೀಸ್ ಮಾಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ‘ಅಪ್ಪು’ ಚಿತ್ರವನ್ನು ರಕ್ಷಿತಾ ವೀಕ್ಷಿಸಿದ್ದಾರೆ. ಅಭಿಮಾನಿಗಳೊಂದಿಗೆ ರಕ್ಷಿತಾ ‘ಅಪ್ಪು’ ಚಿತ್ರ ನೋಡಿ ರಂಜಿಸಿದ್ದಾರೆ. ಈ ವೇಳೆ, ಅರಸು, ಆಕಾಶ್ ಚಿತ್ರಗಳ ನಿರ್ದೇಶಕ ಮಹೇಶ್ ಬಾಬು ಕೂಡ ಸಾಥ್ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಹಲ್ಲುಜ್ಜುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
‘ಬಿಗ್ ಬಾಸ್’ ಸ್ಪರ್ಧಿಗಳಾದ ಕಿಶನ್, ರಕ್ಷಕ್ ಬುಲೆಟ್, ಕಾರ್ತಿಕ್ ಮಹೇಶ್, ನಮ್ರತಾ ಗೌಡ ಕೂಡ ‘ಅಪ್ಪು’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಮತ್ತೊಮ್ಮೆ ಪುನೀತ್ ಸಿನಿಮಾ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಪ್ಪು ಎಂಟ್ರಿಗೆ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಎಂಜಾಯ್ ಮಾಡಿದ್ದಾರೆ.