ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧದ ಕೇಸ್ ಗಳನ್ನು ಕೆದಕಿದ ಆರೋಪಗಳ ಬೆನ್ನಲ್ಲೇ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರಿನ 1ನೇ ಪಾಸ್ಟ್ ಟ್ರ್ಯಾಕ್ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಇದೀಗ ಈ ಸಮನ್ಸ್ಗೆ ಹೈಕೋರ್ಟ್ ತಡೆ ನೀಡುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿ.ಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.