ಭಯೋತ್ಪಾದನೆಗೆ ಭಾರತ ಪ್ರೋತ್ಸಾಹ ನೀಡುತ್ತಿದೆ ಎಂಬ ಪಾಕಿಸ್ತಾನದ ಆರೋಪಕ್ಕೆ ಕೇಂದ್ರ ತರಾಟೆಗೆ ತೆಗೆದುಕೊಂಡಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿ ಒಮ್ಮೆ ಟ್ರೈ ಮಾಡಿ!
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಾಕಿಸ್ತಾನ ಮಾಡಿರುವ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಲ್ಲಿದೆ ಎಂದು ಇಡೀ ಜಗತ್ತಿಗೆ ತಿಳಿದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಪಾಕಿಸ್ತಾನವು ಇತರರ ಬಗ್ಗೆ ಬೆರಳು ತೋರಿಸುವ ಮೊದಲು ತನ್ನ ಆಂತರಿಕ ಸಮಸ್ಯೆಗಳು, ವೈಫಲ್ಯಗಳ ಬಗ್ಗೆ ಆತ್ಮವಿಮರ್ಷೆ ಮಾಡಲಿ ಎಂದು ಹೇಳಿದ್ದಾರೆ.
ಮಂಗಳವಾರ ಜಾಫರ್ ಎಕ್ಸ್ಪ್ರೆಸ್ ರೈಲಿನ ಮೇಲೆ ನಡೆದ ಮಾರಕ ದಾಳಿಯ ನಂತರ ಪಾಕಿಸ್ತಾನವು ಆರೋಪ ಮಾಡಿತ್ತು. ಭಾರತವು ಪಾಕಿಸ್ತಾನದ ವಿರುದ್ಧ ಉಗ್ರರನ್ನು ಎತ್ತಿಕಟ್ಟುತ್ತಿದೆ ಎಂದು ಪಾಕ್ ವಕ್ತಾರ ಶಫ್ಕತ್ ಅಲಿ ಖಾನ್ ಹೇಳಿದ್ದರು. ಪಾಕಿಸ್ತಾನದ ವಕ್ತಾರರು ಅಫ್ಘಾನಿಸ್ತಾನವು ಈ ದಾಳಿಯ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಆದರೆ ತಾಲಿಬಾನ್ ಪಾಕಿಸ್ತಾನದ ಹೇಳಿಕೆಗಳನ್ನು ತಿರಸ್ಕರಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಬಾಲ್ಖಿ ಮಾತನಾಡಿ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಬದಲು ತನ್ನ ಭದ್ರತಾ ಸವಾಲುಗಳತ್ತ ಗಮನಹರಿಸಬೇಕು ಎಂದು ಹೇಳಿದರು. ಆಗಾಗ ಗಡಿ ಘರ್ಷಣೆಗಳು ಸಂಭವಿಸುವುದರಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿವೆ. 400 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ಅನ್ನು ಅಪಹರಿಸಿದ 33 ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ಬಂಡುಕೋರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಭದ್ರತಾ ಪಡೆಗಳು ಹೇಳಿತ್ತು.