ಕೋಲಾರ:- ಕೋಲಾರದ ಸಿಇಎನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಮಲವಿಸರ್ಜನೆ ಸರಿಯಾಗಿ ಆಗ್ತಿಲ್ವಾ? ಡೋಂಟ್ ವರಿ, ಈ ಟಿಪ್ಸ್ ಫಾಲೋ ಮಾಡಿ!
ಸೈಯದ್ ಪುರ್ಖಾನ್ ಬಂಧಿತ ಆರೋಪಿ. ಬಂಧಿತನಿಂದ 50 ಲಕ್ಷ ರುಪಾಯಿ ಬೆಲೆ ಬಾಳುವ 806 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಕೆಟಿಎಂ ಡ್ಯೂಕ್ ಬೈಕ್ ನ್ನ ಪೊಲೀಸರು, ವಶಕ್ಕೆ ಪಡೆದಿದ್ದಾರೆ. ಆರೋಪಿಯು, ನೈಜೀರಿಯಾ, ಇತರೆ ದೇಶಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದ. ಕೋಲಾರದ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಕೋಲಾರದ ಮಡೇರಹಳ್ಳಿ ಬಳಿ ಆರೋಪಿ ಸೈಯದ್ ಪುರ್ಖಾನ್ ನನ್ನು ಅರೆಸ್ಟ್ ಮಾಡಲಾಗಿದೆ.