ಬೆಳಗಾವಿ:- ಹೋಳಿ ಹಬ್ಬ ಹಿನ್ನೆಲೆ ಜಮೀನಿನಲ್ಲಿ ಪಾರ್ಟಿ ಮಾಡ್ತಿದ್ದ ಎರಡು ಗ್ಯಾಂಗ್ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು, ಓರ್ವನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಹೊರ ವಲಯದಲ್ಲಿ ಜರುಗಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಯಳ್ಳೂರ ಗ್ರಾಮದ ಪ್ರಕಾಶ್ ಚತುರ್(51) ಎಂದು ಗುರುತಿಸಲಾಗಿದೆ. ಯುವಕರು, ೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಪಾರ್ಟಿ ಮಾಡ್ತಿದ್ದರು. ಈ ವೇಳೆ ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ನಡೆದಿದೆ.
ಬಳಿಕ ಅಲ್ಲೇ ಗುಂಪು ಕಟ್ಟಿಕೊಂಡು ಯುವಕರು ಹೊಡೆದಾಡಿಕೊಂಡಿದ್ದಾರೆ. ಗಾಯಾಳು ಪ್ರಕಾಶ್ ಚತುರ್ ಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆಸ್ಪತ್ರೆಗೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಗಲಾಟೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.