ಗಾಂಧಿನಗರ : ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ಪರಿಣಾಮ ಅಪಘಾತ ಸಂಭವಿಸಿ, ಓರ್ವ ಮಹಿಳೆ ಸಾವನ್ನಪ್ಪಿದ್ದು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕಳೆದ ಗುರುವಾರ ರಾತ್ರಿ ವಡೋದರಾ ಎಂಬಲ್ಲಿ ಘಟನೆ ನಡೆದಿದೆ.
ಡೋದರಾದ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಾರಣಾಸಿ ನಿವಾಸಿ ರಕ್ಷಿತ್ ಚೌರಾಸಿಯಾ ಎಂಬಾತನೇ ಈ ಅವಾಂತರಕ್ಕೆ ಕಾರಣವಾಗಿದ್ದಾನೆ.
ಈತ ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ 2 ಸ್ಕೂಟರ್ಗಳಿಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿಯ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಯುವಕ ಕಾರಿನಿಂದ ಇಳಿದು ದರ್ಪದಿಂದಲೇ ನಡೆದುಕೊಂಡು ಹೋಗಿದ್ದ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದೆ.