ಹಾಸನ : ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಶೀಲಮ್ಮ (47) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದಿದೆ. ಆನೆ ದಾಳಿಯಿಂದ ಸ್ಥಳದಲ್ಲೇ ಸುಶೀಲಮ್ಮ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ವರ್ಷದ ಮೊದಲ ಚಂದ್ರಗ್ರಹಣ ; ಈ ದಿನ ಏನ್ ಮಾಡಬೇಕು, ಮಾಡಬಾರದು ಗೊತ್ತಾ..?
2025 ರಲ್ಲಿ ಎರಡು ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇದು ನಾಲ್ಕನೆ ಬಲಿಯಾಗಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿ, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಚೀಕನಹಳ್ಳಿ-ಬೇಲೂರು ರಸ್ತೆ ತಡೆದು, ಟೈರ್ಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ ಸಾರಿಗೆ ಬಸ್ ಚಾಲನೆಗೆ ಮುಂದಾದ ಚಾಲಕನ ವಿರುದ್ಧವೂ ಹರಿಹಾಯ್ದಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆಗಮಿಸಿ, ಪ್ರತಿಭಟನಾಕಾರರೊಂದಿಗೆ ಮಾತನಾಡಿದ್ದಾರೆ.