ಹಾವೇರಿ:- ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ.
ಸ್ವಾತಿ ಜೊತೆ ಲವ್ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಸ್ವಾತಿ ಕೊಲೆ ಮಾಡಿದ್ದ. ಸದ್ಯ ನಯಾಜ್ನನ್ನು ಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆತನ ಮತ್ತಿಬ್ಬರು ಸ್ನೇಹಿತರಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದರು. ಚಿತ್ರದುರ್ಗದ ಬಳಿ ವಿನಾಯಕ್ ಮತ್ತು ದುರ್ಗಾಚಾರಿಯನ್ನ ಪೊಲೀಸರು ಬಂಧಿಸಿದ್ದರು. ಆದರೀಗ ಈ ಪ್ರಕರಣವು ಹೊಸ ಆಯಾಮ ಪಡೆದುಕೊಂಡಿದೆ