ಚಿತ್ರದುರ್ಗ : ಪಿಎಸ್ಐ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಗರದ ತುರುವನೂರು ರಸ್ತೆಯಲ್ಲಿ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ತುಮಕೂರಿನ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ಗುಂಪಾಗಿ ನಿಂತಿದ್ದರು. ಈ ವೇಳೆ ಪಿಎಸ್ಐ ಗಾದಿಲಿಂಗಪ್ಪ ಎಂಬುವರು ತಡರಾತ್ರಿಯಲ್ಲಿ ಗುಂಪಾಗಿ ನಿಂತಿದ್ದರ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಹನುಮಂತೇಗೌಡ ನಡುವೆ ಮಾತಿನ ಚಕಮಕಿ ನಡೆದಿದ್ದು, ಹನುಮಂತೇಗೌಡ ಪಿಎಸ್ಐ ಗಾದಿಲಿಂಗಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, “ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ” ಎಂದು ಹನುಮಂತೇಗೌಡ ಪ್ರತಿ ಆರೋಪ ಮಾಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.