ವಿಜಯಪುರ : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅಂಗಡಿ ಹೊತ್ತಿ ಉರಿದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಘಟನೆ ನಡೆದಿದೆ.
ಚಡಚಣ ಪಟ್ಟಣದ ಬಸ್ ನಿಲ್ದಾಣದ ಪಕ್ಕದ ಮೊಡಕಾ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆ ತಡವಾಗಿ ಬಂದ ಪಕ್ಕದಲ್ಲೇ ಇದ್ದ ಪ್ಲಾಸ್ಟಿಕ್ ಪೈಪ್ ಅಂಗಡಿಗೂ ಬೆಂಕಿ ವ್ಯಾಪಿಸಿದೆ. ಬಳಿಕ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಬೇರೆಡೆ ಹರಡದಂತೆ ಕ್ರಮಕೈಗೊಂಡಿದ್ದಾರೆ.