ಹಾವೇರಿ : ಮಾಸೂರ ಗ್ರಾಮದ ಸ್ವಾತಿ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹತ್ಯೆಗೀಡಾದ ಸ್ವಾತಿ ಮನೆಗೆ ಭೇಟಿ ನೀಡಿದ್ದಾರೆ.
ಇಂದು ಮಾಸೂರ ಗ್ರಾಮದಲ್ಲಿರುವ ಸ್ವಾತಿ ಮನೆಗೆ ಭೇಟಿ ನೀಡಿ, ತಾಯಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ನೀವೇನು ಆತಂಕ ಪಡಬೇಡಿ ನಿಮ್ಮ ಮಗಳನ್ನ ಹತ್ಯೆ ಮಾಡಿದವರು ಸಿಕ್ಕಿದ್ದಾರೆ. ಹಂತಕರಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಕೂಡ ಉಪಸ್ಥಿತರಿದ್ದರು.
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಯುವತಿ 22 ವರ್ಷದ ಸ್ವಾತಿ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಮೂರು ದಿನಗಳ ಕಾಲ ಮನೆಯವರೆಲ್ಲಾ ಹುಡುಕಿ 7ನೇ ತಾರೀಖಿನಿಂದ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ. ಈಕೆಯ ಶವ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮಾರ್ಚ್ 6 ರಂದು ಯುವತಿಯ ಮೃತದೇಹ ಸಿಕ್ಕಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.