ವಿಜಯನಗರಿ : ಗುಜರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಡೀ ಫ್ಯಾಕ್ಟರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಆರಂಭದಲ್ಲಿ ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಇಡೀ ಫ್ಯಾಕ್ಟರಿಯನ್ನೇ ಆವರಿಸಿದೆ. ಪಕ್ಕದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಟೈರ್ಗಳನ್ನು ಪುಡಿಮಾಡುವ ಕಾರ್ಖಾನೆಗೆ ಆವರಿಸಿದೆ. ಇದೇ ವೇಳೆ ಅಗ್ನಿಶಾಮಕ ಸಿಬ್ಬಂದಿ, ಜೊತೆಗೆ ಸ್ಥಳೀಯರು ಸೇರಿ ಕಾರ್ಖಾನೆಯ ಒಳಗಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ ಸಿಪಿಐ ದೀಪಕ್ ಬೂಸರೆಡ್ಡಿ, ಜೆಡಿಎಸ್ ಮುಖಂಡ ಪುತ್ರೇಶ್ ಕೆ, ಪುರಸಭೆ ಮುಖ್ಯಾಧಿಕಾರಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.