ಮಂಡ್ಯ : ಮಳವಳ್ಳಿ ಪಟ್ಟಣದಲ್ಲಿ ಕಲುಷಿತ ಆಹಾರ ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ಚಸ್ಥರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಘಟನೆ ನಡೆದಿದೆ.
ಮೇಘಾಲಯ ರಾಜ್ಯದ ಕೇರ್ ಲಾಂಗ್ (14) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶನಿವಾರ ಪಟ್ಟಣದ ಮದನ್ ಚೌಟ್ರಿಯಲ್ಲಿ ಹೋಳಿ ಆಚರಣೆ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಪಟ್ಟಣದ ಹೋಟೇಲ್ ಊಟಕ್ಕೆಂದು ರೈಸ್ ಬಾತ್ ಸರಬರಾಜು ಮಾಡಿತ್ತು.
ಹೋಳಿ ಸಂಭ್ರಮ ಮುಗಿದ ಬಳಿಕ ರೈಸ್ ಬಾತ್ ತಿಂದು ಜನರು ಉಳಿದ ಊಟವನ್ನು ಪಕ್ಕದಲ್ಲೆ ಇದ್ದ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್ ಗೆ ನೀಡಲಾಗಿತ್ತು. ಈ ಊಟವನ್ನು ರಾತ್ರಿ ಸೇವಿಸಿದ್ದ 30 ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಇದರಲ್ಲಿ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಉಳಿದ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಮಳವಳ್ಳಿ ಆಸ್ಪತ್ರೆಗೆ ಡಿಎಚ್ ಒ ಮೋಹನ್ ಭೇಟಿ ನೀಡಿ, ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದರು. ಘಟನೆಯಂದ ಮಳವಳ್ಳಿ ಪಟ್ಟಣದಲ್ಲಿ ಆತಂಕ ವಾತವಾರಣ ನಿರ್ಮಾಣವಾಗಿದೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.