ವಿಜಯನಗರ : ಆಕಸ್ಮಿಕ ಬೆಂಕಿಯಿಂದಾಗಿ ಶ್ರೀಗಂಧದ ಮರಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮರಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲಿ ನಡೆದಿದೆ.
ರೈತ ಚನ್ನಬಸಪ್ಪ ಎನ್ನುವವರಿಗೆ ಸೇರಿದ ಜಮೀನಿನಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ರೈತ ಚನ್ನಬಸಪ್ಪ ತನ್ನ 9 ಎಕರೆ ಜಮೀನಿನಲ್ಲಿ ಶ್ರೀಗಂಧ, ರಕ್ತಚಂದನ, ಪೇರಲ ಹಾಗೂ ಬಾಳೆ ಬೆಳೆದಿದ್ದರು. 2018ರಿಂದ ಸಸಿಗಳನ್ನ ಹಾಕಿ ಪೋಷಣೆ ಮಾಡುತ್ತಿದ್ದರು. ಆದರೆ ಇದೀಗ ಬೆಂಕಿ ತಗುಲಿ 200ಕ್ಕೂ ಅಧಿಕ ಮರಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.