ಬೆಂಗಳೂರು;- ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ. ಈಗಾಗಲೇ 16 ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದೆ. ಬಾಕಿ ಇರುವ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆದಿದ್ದು, ಜನವರಿ ಹಾಗೂ ಫೆಬ್ರವರಿ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವರು ಸದನದಲ್ಲಿ ಉತ್ತರಿಸಿದ್ದಾರೆ.
ಗೃಹಲಕ್ಷ್ಮಿ ಹಣ ಬಾಕಿ ಇರುವ ಬಗ್ಗೆ, ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಪ್ರಶ್ನಿಸಿ, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ದೂರಿದ್ದಾರೆ. ಅವರ ಪ್ರಶ್ನೆಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ಅವರ ಪರವಾಗಿ ಸಂತೋಷ ಲಾಡ್ ಉತ್ತರ ನೀಡಿ, ಸಂಪನ್ಮೂಲ ಸಂಗ್ರಹವನ್ನು ಆಧರಿಸಿ ಸರ್ಕಾರ ಹಣ ಬಿಡುಗಡೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಸಮಸ್ಯೆಗಳ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆಯಾಗಿಲ್ಲ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪುಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ