ಇಸ್ಲಾಮಾಬಾದ್:- ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ‘ಭಯೋತ್ಪಾದಕನನ್ಮು ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಜೈಲಿನಲ್ಲಿ ಕೈದಿಗಳ ಕೂಗಾಟ ಚೀರಾಟದ ವಿಡಿಯೋ ವೈರಲ್ : ಅಸಲಿಗೆ ಆಗಿದ್ದೇನು ಗೊತ್ತಾ.?
ರಿಯಾಸಿ ಬಸ್ ಮೇಲಿನ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಕತಾಲ್ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
ಅಬು ಕತಾಲ್ ತನ್ನ ಭದ್ರತಾ ಸಿಬ್ಬಂದಿಯೊಂದಿಗೆ ಸಂಜೆ 7 ಗಂಟೆ ಸುಮಾರಿಗೆ ಝೀಲಂ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ದಾಳಿಕೋರರು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ದಾಳಿಕೋರರು 15 ರಿಂದ 20 ಸುತ್ತು ಗುಂಡು ಹಾರಿಸಿದ್ದಾರೆ. ಈ ದಾಳಿಯಿಂದ ಅಬು ಕತಾಲ್ ಮತ್ತು ಆತನ ಓರ್ವ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇನ್ನೂ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಹಫೀಜ್ ಸಯೀದ್ನ ಆಪ್ತ ಸಹಾಯಕನಾಗಿದ್ದ ಅಬು ಕತಾಲ್ ಜೂನ್ 9 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ.