ಸೌತ್ ಬ್ಯೂಟಿ ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್ಗೆ ರೆಡಿ ಆಗಿದ್ದು, ಅಭಿಮಾನಿಗಳು ನೆಚ್ಚಿನ ನಟಿ ನಿರ್ಮಾಣದ ಸಿನಿಮಾ ವೀಕ್ಷಣೆಗೆ ಕಾತುರರಾಗಿದ್ದಾರೆ.
ಸಮಂತಾ ನಿರ್ಮಾಣದ ‘ಶುಭಂ’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ‘ಶುಭಂ’ ಸಿನಿಮಾ ಚಿತ್ರೀಕರಣ ಮುಗಿದಿದ್ದು, ರಿಲೀಸ್ಗೆ ರೆಡಿಯಾಗಿದೆ. ಇನ್ನಷ್ಟು ಸುದ್ದಿಗಳನ್ನು ಶೀಘ್ರವೇ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ. ಸಿನಿಮಾ ರಿಲೀಸ್ ಡೇಟ್ ಬಗ್ಗೆ ಅಧಿಕೃತವಾಗಿ ತಿಳಿಸಬೇಕಿದೆ.
ಸಮಂತಾ ನಿರ್ಮಾಣ ಮಾಡಿರುವ ಈ ಸಿನಿಮಾ ರೆಟ್ರೋ ಕಾಲದ ಕತೆ ಹೊಂದಿದ್ದು, ಹಾಸ್ಯ ಮಿಶ್ರಿತ ಕೌಟುಂಬಿಕ ಕತೆಯುಳ್ಳ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಹಲವು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ನಿರ್ದೇಶಕರು ಕೂಡ ಹೊಸಬರೇ ಆಗಿದ್ದಾರೆ. ಚಿತ್ರಕ್ಕೆ ಪ್ರವೀಣ್ ಕಂಡ್ರೇಗುಳ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.
ಇನ್ನೂ ‘ಮಾ ಈಂಟಿ ಬಂಗಾರಂ’ ಸಿನಿಮಾ, ನಿರ್ದೇಶಕಿ ನಂದಿನಿ ರೆಡ್ಡಿ ಜೊತೆ ಹೊಸ ಚಿತ್ರ, ಬಾಲಿವುಡ್ ಸಿನಿಮಾಗಳಲ್ಲಿ ಸಮಂತಾ ತೊಡಗಿಸಿಕೊಂಡಿದ್ದಾರೆ.