ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಏಕಾಏಕಿ ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಚೆನ್ನೈನ ಪ್ರತಿಷ್ಠಿತ ಆಸ್ಪತ್ರೆಗೆ ರೆಹಮಾನ್ ದಾಖಲಾಗಿದ್ದರು. ಹೀಗಾಗಿ ಅಭಿಮಾನಿಗಳು ಫುಲ್ ಟೆನ್ಷನ್ ತೆಗೆದುಕೊಂಡಿದ್ದರು.
ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದಲೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ!
ಆದರೆ ವೈದ್ಯರು ರೆಹಮಾನ್ ಆರೋಗ್ಯ ಪರಿಶೀಲಿಸಿದ್ದು, ಯಾವುದೇ ದೊಡ್ಡ ಸಮಸ್ಯೆ ಇರದ ಕಾರಣ ಡಿಸ್ಚಾರ್ಜ್ ಮಾಡಿದ್ದಾರೆ. ಹೀಗಾಗಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ರೆಹಮಾನ್ ಪುತ್ರ ಎ.ಆರ್.ಅಮೀನ್ ತಂದೆಯ ಆರೋಗ್ಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರೀತಿಯ ಅಭಿಮಾನಿಗಳು ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು. ನಿರ್ಜಲೀಕರಣದಿಂದ ನನ್ನ ತಂದೆ ಸ್ವಲ್ಪ ನಿಶ್ಯಕ್ತಿ ಹೊಂದಿದ್ದರು. ಆದ್ದರಿಂದ ನಾವು ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿಸಿದೆವು. ಆದರೆ ಅವರು ಈಗ ಚೆನ್ನಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ನಿರಾಳವಾಗಿದ್ದಾರೆ.
ಎ.ಆರ್.ರೆಹಮಾನ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಎ.ಆರ್. ರೆಹಮಾನ್ ಆರೋಗ್ಯವಾಗಿದೆ. ಚಿಂತೆಪಡುವ ಅವಶ್ಯಕತೆಯಿಲ್ಲ, ಅವರು ಆರಾಮಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.