ಕಲಬುರಗಿ: ಶ್ರೀ ಗುರು ದತ್ತಾತ್ರೇಯನ ಸನ್ನಿಧಿಯಲ್ಲಿ ಮಂಗಳ ಮುಖಿಯರ ಬಡಿದಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರಲ್ಲಿರೋ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಮಂಗಳಮುಖಿಯರು ಪರಸ್ಪರ ಜಡೆ ಹಿಡಿದುಕೊಂಡು ನೆಲಕ್ಕೆ ಉರುಳಾಡಿ ಬಡಿದಾಡಿಕೊಂಡಿದ್ದಾರೆ. ಮಂಗಳಮುಖಿಯರ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.