ಚೆನ್ನೈ:- ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್ ವಿಧಿವಶರಾಗಿದ್ದಾರೆ.
ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಕ್ರೌರ್ಯ!
ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಸೂಪರ್ ಸ್ಟಾರ್ ಸಿನಿಮಾಗಳಲ್ಲಿ ಬಿಂದು ಘೋಷ್ ನಟಿಸಿದ್ದರು. ಗುಂಡು ಕಲ್ಯಾಣಂ ಜೊತೆ ಬಿಂದು ಘೋಷ್ ಹೆಚ್ಚಾಗಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದರು. ವಯೋಸಹಜ ಕಾಯಿಲೆಗಳಿಂದ
ಬಳಲುತ್ತಿದ್ದ ಬಿಂದು ಘೋಷ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಬಿಂದು ಘೋಷ್ ಅವರ ಪಾರ್ಥಿವ ಶರೀರವನ್ನು ಚೆನ್ನೈನ ವಿರುಗಂಬಕ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದೆ. ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.