ಕೋಲಾರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಗೌರವಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಸಮಾಜ ಸೇವಕ, ಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಹೂಡಿ ವಿಜಯ್ ಕುಮಾರ್ ಅವರು, ಬೆಂಗಳೂರಿನ ಖ್ಯಾತ ಸಪ್ತಗಿರಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಮಾಸ್ತಿ ಯಲ್ಲಿರುವ, ಕೆ.ಪಿ.ಎಸ್ ಶಾಲೆಯ ಆವರಣದಲ್ಲಿ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಉಚಿತ ಆರೋಗ್ಯ ತಪಾಸಣಾ, ಶಸ್ತ್ರಚಿಕಿತ್ಸಾ ಮತ್ತು ರಕ್ತದಾನ ಶಿಬಿರ ನಡೆಯಿತು.
ವಿವಿಧ ಆರೋಗ್ಯ ತಪಾಸಣೆಗಳು, ಶಸ್ತ್ರಚಿಕಿತ್ಸಾ ಸಲಹೆಗಳು ಮತ್ತು ಉಚಿತ ವೈದ್ಯಕೀಯ ಸೇವೆಗಳ ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ಅರೋಗ್ಯ ತಪಾಸಣೆ ನಡೆಸಲಾಗಿದ್ದು, ರೋಗ್ಯ ಸಮಸ್ಯೆ ಕಂಡುಬಂದಲ್ಲಿ ಹೆಚ್ಚಿನ ಚಿಕಿತ್ಸೆಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಕೊಡಲು ಸಹ ಮುಂದಾಗಿದೆ. ನೂರಾರು ಜನರು ಉಚಿತ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಗೊಳಗಾದರು.
ಮಾಲೂರು ತಾಲೂಕಿನ ಪ್ರತಿಯೊಂದು 28 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರತಿ ಭಾನುವಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸುತ್ತಿರುವ ಉಚಿತ ಆರೋಗ್ಯ ಶಿಬಿರದಲ್ಲಿ ಶ್ವೇತಾ ವಿಜಯ ಕುಮಾರ್, ಸ್ವಾಭಿಮಾನಿ ಜನತಾ ಪಕ್ಷದ ಅಧ್ಯಕ್ಷ ಪ್ರಭಾಕರ್,ಸ್ವಾಭಿಮಾನಿ ಜನತಾ ಪಕ್ಷದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.