ಹುಬ್ಬಳ್ಳಿ: ಇಂದು ನಗುವಿನ ರಾಜಕುಮಾರ ಡಾ.ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟು ಹಬ್ಬ. ಇಂದು ಹುಬ್ಬಳ್ಳಿ ನಗರದ ಹಳೆ ಬಸ್ ನಿಲ್ದಾಣ ಎದುರು, ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ, ಹುಬ್ಬಳ್ಳಿ ಅಟೋ ಚಾಲಕರ ಮಾಲೀಕರ ಸಂಘದ ವತಿಯಿಂದ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ನೂರಾರು ಅಟೋ ಚಾಲಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಾ. ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮನ ಸಲ್ಲಿಸಿದರು. ಅಲ್ಲದೇ ಅಭಿಮಾನಿಗಳಿಗೆ ಪಲಾವ್ ವಿತರಣೆ ಮಾಡಲಾಯಿತು.
ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಮಾತನಾಡಿ, ಪುನೀತ್ ರಾಜ್ಕುಮಾರ್ ಅವರ 50 ನೇ ಹುಟ್ಟು ಹಬ್ಬ ಆಚರಣೆ ಮಾಡಲಾಗಿದೆ. ಸಾಕಷ್ಟು ನೋವು ಬೇಸರ ಇದೆ. ನಾಡಿನ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ ಮುಂದೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.