ಬೀದರ್ : ಬೀದರ್ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು.
ರೈತರು ಹೊಸದಾಗಿ ಕೃಷಿ ಪಂಪ್ಸೆಟ್ಗಳು ಅಳವಡಿಕೆ ಮಾಡಲು ವಿದ್ಯುತ್ ನೊಂದಣಿ ಸಲುವಾಗಿ ಸುಮಾರು 50-60 ಸಾವಿರ ಖರ್ಚು ಬರುತ್ತಿದ್ದು, ಅದನ್ನು ಮೊದಲಿನಂತೆ ಜಾರಿ ಮಾಡಬೇಕು. ನೊಂದಣಿ ಪ್ರಕ್ರಿಯೆ ಶೀಘ್ರದಲ್ಲಿ ಜಾರಿ ಮಾಡಬೇಕು, ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಿಸಬೇಕು, ಡಿಸಿಸಿ ಬ್ಯಾಂಕ್ ನಿಂದ ರೈತರಿಗೆ ಸಾಲ ಕೊಡಿಸುವ ವ್ಯವಸ್ಥೆ ಮಾಡಬೇಕು. ಮಂಜಿನಿಂದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ರೈತರಿಗೆ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿಪತ್ರ ಸಲಿಸಿದರು.