ಧಾರವಾಡ : ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಹೊಯ್ಸಳ್ ನಗರದಲ್ಲಿ ನಡೆದಿದೆ.
ಬೈಕ್ ಸವಾರನು ತನ್ನ ಪಾಡಿಗೆ ತಾನು ಹೋಗುತ್ತಿದ್ದಾಗ ಬೈಕ್ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಬೈಕ್ ಸವಾರನಿಗೆ ಗುದಿದ್ದು, ಪರಿಣಾಮವಾಗಿ ಬೈಕ್ ಸವಾರನು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಸಂಚಾರಿ ಪೋಲಿಸರು ಮೃತ ದೇಹವನ್ನ ಶವಾಗಾರಕ್ಕೆ ಸಾಗಿಸಿ ಅಪರಿಚಿತ ವಾಹನಕ್ಕೆ ಹುಡುಕಾಟವನ್ನ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.