ನವದೆಹಲಿ: ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗೆ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ಸಂಸದ ಈರಣ್ಣ ಕಡಾಡಿ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು,
ದೇಶದಲ್ಲಿ ಹೆಚ್ಚುತ್ತಿರುವ ನಕಲಿ ಚಿಕಿತ್ಸಾ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆದು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿದರು.
Cockroach Milk: ಜಿರಳೆ ಹಾಲು ಕುಡಿದಿದ್ದೀರಾ? ಇದ್ರಲ್ಲೂ ಅಡಗಿದ್ಯಂತೆ ಅದ್ಭುತ ಆರೋಗ್ಯ ಪ್ರಯೋಜನಗಳು!
ವಿಮಾ ಮೊತ್ತದ ಲಾಭ ಪಡೆಯಲು ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪಿತ್ತಕೋಶ ತೆಗೆಯುವಿಕೆ, ಆಂಜಿಯೋಪ್ಲ್ಯಾಸ್ಟಿ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಂತಹ ವಿಧಾನಗಳನ್ನು ಈಗ ಅನೇಕ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ.
ಅನೇಕ ಆಸ್ಪತ್ರೆಗಳಲ್ಲಿ, ವೈದ್ಯರ ಆದಾಯವು ಅವರು ಮಾಡುವ ಶಸ್ತ್ರಚಿಕಿತ್ಸೆಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ ಮತ್ತು ಅವರಿಗೆ ಗುರಿಗಳನ್ನು ನೀಡಲಾಗುತ್ತದೆ. ಇದರಿಂದಾಗಿ ರೋಗಿಗಳು ಅನಗತ್ಯ ಶಸ್ತ್ರಚಿಕಿತ್ಸೆಗಳಿಗೆ ತಳ್ಳಲ್ಪಡುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.